ಆಹಾ, ನಾವ್ ಆಳುವವರು!!

ಆಹಾ, ನಾವ್ ಆಳುವವರು

ಓಹೋ ನಾವ್ ಅಳಿಸುವವರು ||ಪ||

ಕುರ್ಚಿಯ ಕಾಲ್ಗಳನೊತ್ತುವೆವು
ತಡೆದರೆ ಕೈಯನೆ ಕಡಿಯುವೆವು|

ದೇಶವ ಪೊರೆಯುವ ಹಿರಿಗಣರು
ಖಜಾನೆ ಕೊರೆಯುವ ಹೆಗ್ಗಣರು|

ಜಾತ್ಯಾತೀತರು ಎನ್ನುವೆವು
ಜಾತೀಯತೆಯ ಬೆಳೆಸುವೆವು|

ಗಾಂಧಿಯ ನಾಮ ಜಪಿಸುವೆವು
ಬ್ರಾಂದಿಯ ಕುಡಿದು ಮಲಗುವೆವು|

ಬಿದ್ದರೆ ಪಾದವ ಹಿಡಿಯುವೆವು
ಎದ್ದರೆ ಎದೆಗೆ ಒದೆಯುವೆವು|

ಪಾದಯಾತ್ರೆಯನು ಮಾಡುವೆವು
ಕುರ್ಚಿಯ ಕನಸನು ಕಾಣುವೆವು|

ಗೆದ್ದವರನೆ ನಾವ್ ಕೊಳ್ಳುವೆವು
ಸ್ವಂತದ ಸೇವೆಯ ಮಾಡುವೆವು|

ಸಮಾಜ ಸೇವಕರೆನ್ನುವೆವು
ದೇಶವ ಹರಿದು ತಿನ್ನುವೆವು|
*********
-ಕವಿನಾಗರಾಜ್.

2 thoughts on “ಆಹಾ, ನಾವ್ ಆಳುವವರು!!”

  1. ದೇಶ ರಕ್ಷಿಸುವೆವು ಎಂದು ಆರಿಸಿ ಬಂದು ಭಕ್ಷಣೆ ಮಾಡುವವರ ಗುಣಲಕ್ಷಣ ಸರಿಯಾಗಿ ವಿವರಿಸಿದ್ದೀರ

Leave a Reply to pramodlns Cancel Reply

Your email address will not be published. Required fields are marked *

Scroll to Top